ಡೈಲಿ ವಾರ್ತೆ: 21/OCT/2023

ಭದ್ರಾವತಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ!

ಶಿವಮೊಗ್ಗ: ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ.

ಸೈಯದ್ ರಾಝಿಕ್ (30) ಮೃತ ದುರ್ದೈವಿ. ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹತ್ಯೆ ಮಾಡಿ, ಪರಾರಿಯಾಗಿದ್ದಾರೆ.
ಈ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ಬಂಧನಕ್ಕಾಗಿ ಪೋಲಿಸರು ಬಲೆ ಬೀಸಿದ್ದಾರೆ.