![](https://dailyvarthe.com/wp-content/uploads/2025/02/24x33_Add_PUCollegeSchool-scaled.jpg)
![](https://dailyvarthe.com/wp-content/uploads/2023/10/IMG-20231022-WA0001-1024x575.jpg)
ಡೈಲಿ ವಾರ್ತೆ: 22/OCT/2023
![](https://dailyvarthe.com/wp-content/uploads/2025/02/IMG-20250205-WA0168-1.jpg)
![](https://dailyvarthe.com/wp-content/uploads/2024/10/IMG-20241023-WA0255-scaled.jpg)
ನಗರಸಭಾ ಸದಸ್ಯನ ಹತ್ಯೆಗೆ ಯತ್ನ: ಮೂವರು ಆರೋಪಿಗಳ ಬಂಧನ
ಚಿಕ್ಕಬಳ್ಳಾಪುರ: ಚಿಂತಾಮಣಿಯ ನಗರಸಭಾ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ವಶಕ್ಕೆ ಪಡೆದ ಆರೋಪಿಗಳನ್ನು ಜಾನ್, ದಿನೇಶ್ ಹಾಗೂ ಅರುಣ್ ಎಂದು ಗುರುತಿಸಲಾಗಿದೆ.
ಅ.13 ರಂದು ಆರೋಪಿಗಳು ಆಗ್ರಹಾರ ಮುರುಳಿ ಎಂಬವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದರು. ಬಳಿಕ ತೀವ್ರ ಗಾಯಗೊಂಡಿದ್ದ ನಗರಸಭಾ ಸದಸ್ಯನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಪ್ರಾಣಾಪಾಯದಿಂದ ಪಾರಾಗಿರುವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ವಿಚಾರವಾಗಿ ಚಿಂತಾಮಣಿ ನಗರ ಬಂದ್ ಸಹ ಮಾಡಲಾಗಿತ್ತು. ಈಗ ಪೊಲೀಸರು ಮೂವರನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕವಷ್ಟೇ ಹತ್ಯೆ ಯತ್ನಕ್ಕೆ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.