ಡೈಲಿ ವಾರ್ತೆ: 23/OCT/2023

ಬಂಟ್ವಾಳ : ಸಾಲ ಬಾಧೆಯಿಂದ ಹಸಿ ಮೀನು ವ್ಯಾಪಾರಿ ನೇಣು ಬಿಗಿದು ಆತ್ಮಹತ್ಯೆ.

ಬಂಟ್ವಾಳ : ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ಸೋಮವಾರ ನಡೆದಿದೆ.

ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ‌ಮಾಡಿಕೊಂಡ ಯುವಕ.

ಹಸಿ ಮೀನು ವ್ಯಾಪಾರ ಮಾಡುತ್ತಿದ್ದ ಸನತ್ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದು ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.

ಟೆಂಪೋವನ್ನು ಕೂಡ ಮಾರಾಟ ಮಾಡಿದ್ದ ಈತ ಕೋಳಿ ಅಂಕ (ಜೂಜಾಟ) ದಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ‌ನೊಂದುಕೊಂಡಿದ್ದ ಎಂದು ತಿಳಿದುಬಂದಿದೆ.

ಮನೆ ಮಂದಿ ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ‌ನವರಾತ್ರಿ‌ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದು, ಮನೆಯವರು ಪೂಜೆ ಮುಗಿಸಿಕೊಂಡು ಮನೆಗೆ ಬಂದಾಗ ಈತ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ರುವುದು ಗಮನಕ್ಕೆ ಬಂದಿದೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.