



ಡೈಲಿ ವಾರ್ತೆ: 26/OCT/2023


ದಕ್ಷಿಣ ಕನ್ನಡದ ಯುವಕ ದುಬೈನಲ್ಲಿ ಹೃದಯಾಘಾತದಿಂದ ಮೃತ್ಯು!
ಮಂಗಳೂರು: ಕೂಳೂರು ನಿವಾಸಿ ಯುವಕ ದುಬೈನಲ್ಲಿ
ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕೂಳೂರು ಪಂಜಿಮೊಗರು ವಿದ್ಯಾನಗರ ನಿವಾಸಿ ಮುಹಮ್ಮದ್ ಎಂಬವರು ಪುತ್ರ ಅಖ್ತರ್(27) ಎಂದು ಗುರುತಿಸಲಾಗಿದೆ.
ಅಖ್ತರ್ ಕಳೆದ ಭಾನುವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಲ್ಲೆ ಮೃತಪಟ್ಟಿದ್ದಾರೆ. ಅವರ ಮೃತದೇಹ ಊರಿಗೆ ತರಲು ಸಿದ್ಧತೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.