ಡೈಲಿ ವಾರ್ತೆ: 27/OCT/2023

ಚಿಕ್ಕಮಗಳೂರು: 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ!

ಚಿಕ್ಕಮಗಳೂರು: ಕಾಫಿನಾಡ ಪ್ರವಾಸಿ ತಾಣ ಮುಳ್ಳಯ್ಯನಗಿರಿ ದತ್ತಪೀಠ ಭಾಗಕ್ಕೆ 3 ದಿನಗಳ ಕಾಲ ಪ್ರವಾಸಿಗರನ್ನು ನಿಷೇಧಿಸಲಾಗಿದೆ.

ದತ್ತಮಾಲಾ ಅಭಿಯಾನದ ಹಿನ್ನೆಲೆ ಪ್ರವಾಸಿಗರಿಗೆ 3 ದಿನ ಗಿರಿ ಭಾಗ ಬಂದ್ ಮಾಡಲಾಗಿದೆ. ನವೆಂಬರ್ 4 ಬೆಳಗ್ಗೆ 6 ಗಂಟೆಯಿಂದ ನವೆಂಬರ್ 6 ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ. ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೂ ಪ್ರವಾಸ ನಿಷೇಧಿಸಲಾಗಿದೆ.

ಅಕ್ಟೋಬರ್ 30 ರಿಂದ ನವೆಂಬರ್ 5 ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಮುಳ್ಳಯ್ಯನಗಿರಿಗೆ ಪ್ರವಾಸಿಗರ ನಿಷೇಧ ಹೇರಲಾಗಿದೆ. ದತ್ತಪೀಠಕ್ಕೆ ಡಿಸಿ, ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.