ಡೈಲಿ ವಾರ್ತೆ: 28/OCT/2023

ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಕುಮಾರಿ ಸಾನ್ವಿ ಸುವರ್ಣ

ಬಂಟ್ವಾಳ : ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕವು ನಿರ್ವಹಿಸುವ ಬಂಟ್ವಾಳ ತಾಲೂಕು 17 ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಡೇಶಿವಾಲಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಸುವರ್ಣ ಆಯ್ಕೆ ಯಾಗಿರುತ್ತಾರೆ.

ಕಡೇಶಿವಾಲಯ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿಸೆಂಬರ್ 06 ರಂದು ನಡೆಯಲಿರುವ ಸಮ್ಮೇಳನದಲ್ಲಿ ತಾಲೂಕಿನ 18ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಭಾಗವಹಿಸಲಿದ್ದಾರೆ.

ಸಾನ್ವಿ ಯವರು ಸುಂದರ ಪೂಜಾರಿ ವಿಶಾಲಾಕ್ಷಿ ದಂಪತಿಗಳ ಪುತ್ರಿ. ಕಲಿಕೆಯಲ್ಲಿ ಉತ್ತಮ ಸಾಧನೆ ತೋರುತ್ತಿರುವ ಬಾಲ ಪ್ರತಿಭೆ. ಎಳೆಯ ವಯಸ್ಸಿನಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿ ಕೊಂಡಿರುವ ಇವರು ಭಾರತ ಸರಕಾರದ ಶಿಕ್ಷಣ ಸಚಿವಾಲಯದಿಂದ ಸಶಸ್ತ್ರ ಪಡೆಗಳ ಶೂರರ ಸ್ಮರಣಾರ್ಥವಾಗಿ ನೀಡಲಾಗುವ “ವೀರಗಾಥಾ” ಪ್ರಮಾಣ ಪತ್ರ ಪಡೆದಿರುವರು.
ಭಾರತೀಯ ಜೀವ ವಿಮಾ ನಿಗಮವು ನೀಡುವ ಸಾಧನಾ ಪ್ರಶಸ್ತಿಯನ್ನು ಪಡೆದ ಈಕೆ ಉತ್ತಮ ಮಾತುಗಾರರು. ಸ್ಪರ್ಧಾತ್ಮ ಪರೀಕ್ಷೆಗಳಿಗೆ ತಯಾರಿ, ಫೊಟೊಗ್ರಾಫಿ, ನೃತ್ಯ, ಬರವಣಿಗೆ, ಚಿತ್ರ ಕಲೆ ಇವರ ಹವ್ಯಾಸ ಎಂದು ಕಡೇಶಿವಾಲಯ ಶಾಲಾ ಮುಖ್ಯೋಪಾಧ್ಯಾಯ ಬಾಬು ಪೂಜಾರಿ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.