ಡೈಲಿ ವಾರ್ತೆ: 31/OCT/2023

ಕೋಟತಟ್ಟು ಗ್ರಾ. ಪಂ. ವತಿಯಿಂದ
ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಕಾರ್ಯಕ್ರಮ

ಕೋಟ:ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಸತೀಶ್ ಕುಂದರ್ ಬಾರಿಕೆರೆ ಅವರ ಅಧ್ಯಕ್ಷತೆಯಲ್ಲಿ “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ” ಕಾರ್ಯಕ್ರಮವು ಅ. 31 ರಂದು ಮಂಗಳವಾರ ನಡೆಯಿತು.

ಬ್ರಹ್ಮಾವರ ತಾಲೂಕು ಪಂಚಾಯತ್ ಮಾನ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಹೆಚ್.ವಿ. ಇಬ್ರಾಹಿಂಪುರ್ ಅವರು ಉದ್ಯೋಗ ಖಾತರಿ ಯೋಜನೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಅವರು ಮನೆ ಮನೆಗೆ ತೆರಳಿ ಉದ್ಯೋಗ ಖಾತ್ರಿ ಯೋಜನೆಯ ಮಾಹಿತಿ ಕರ ಪತ್ರ ನೀಡಿದರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ಶ್ರೀಮತಿ ವಿದ್ಯಾ ಪಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವೀಂದ್ರ ರಾವ್, ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.