



ಡೈಲಿ ವಾರ್ತೆ: 03/NOV/2023


ಪಡುಬಿದ್ರಿ:ಬೈಕ್ ಸವಾರನ ಮೇಲೆ ಟ್ಯಾಂಕರ್ ಹರಿದು ಯುವಕ ಮೃತ್ಯು!
ಪಡುಬಿದ್ರಿ : ಯುವಕನೋರ್ವ ಟ್ಯಾಂಕರ್ ಹರಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಪೇಟೆಯ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಮೃತನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುವ ಬಸ್ ನಿಲ್ದಾಣದಲ್ಲಿ ಹೆದ್ದಾರಿಯಲ್ಲಿ ಖಾಸಗಿ ಬಸ್ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ ವೇಳೆ ಹಿಂಬದಿಯಲ್ಲಿದ್ದ ಬೈಕ್ ಡಿಕ್ಕಿ ಹೊಡೆದು ಪ್ರಜ್ವಲ್ ರಸ್ತೆಗೆ ಬಿದ್ದಿದ್ದಾನೆ.
ಇದೇ ವೇಳೆ ಟ್ಯಾಂಕರ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ತೀವ್ರತೆಗೆ ಚಕ್ರದಡಿ ಸಿಲುಕಿದ್ದು, ಬಳಿಕ ಮೃತದೇಹವನ್ನು ಹೊರತೆಗೆಯಲಾಯಿತು. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.