ಡೈಲಿ ವಾರ್ತೆ: 05/NOV/2023

ಬಾಬಾ ವಂಗಾ ಭವಿಷ್ಯವಾಣಿ: 2024ಕ್ಕೆ ಭಯಾನಕ ಹವಾಮಾನ ಘಟನೆ, ಭಯೋತ್ಪಾದಕ ದಾಳಿಗಳಲ್ಲಿ ಹೆಚ್ಚಳ.!

ಸೋಫಿಯಾ: 2024 ಕ್ಕೆ ಭಯಾನಕ ಹವಾಮಾನ ಘಟನೆಗಳು ಹಾಗೂ ಭಯೋತ್ಪಾದಕ ದಾಳಿಗಳಲ್ಲಿ ಏರಿಕೆಯಾಗಲಿದೆ ಎಂದು ಬಾಬಾ ವಂಗಾ ಅವರು ಭವಿಷ್ಯ ನುಡಿದಿದ್ದಾರೆ.

ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೂ ಕರೆಯಲ್ಪಡುವ ಬಾಬಾ ವಂಗಾ ಅವರು, 9/11 ಭಯೋತ್ಪಾದಕ ದಾಳಿಗಳು, ರಾಜಕುಮಾರಿ ಡಯಾನಾ ಸಾವು, ಚೆರ್ನೋಬಿಲ್ ದುರಂತ ಮತ್ತು ಬ್ರೆಕ್ಸಿಟ್‌ನಂತಹ ಪ್ರಮುಖ ವಿಶ್ವ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದರು. 2024 ರಲ್ಲಿ ಅವರು ಏಳು ಭವಿಷ್ಯವಾಣಿಗಳನ್ನು ನುಡಿದಿದ್ದಾರೆ.

ಮುಂದಿನ ವರ್ಷ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೇಲೆ ಸಹ ದೇಶವಾಸಿಯಿಂದ ಹತ್ಯೆಯ ಪ್ರಯತ್ನ ನಡೆಯಬಹುದು. ಯುರೋಪ್‌ನಲ್ಲಿ ಹೆಚ್ಚಿದ ಭಯೋತ್ಪಾದಕ ದಾಳಿಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮುಂದಿನ ವರ್ಷ “ದೊಡ್ಡ ದೇಶ” ಜೈವಿಕ ಶಸ್ತ್ರಾಸ್ತ್ರ ಪರೀಕ್ಷೆಗಳು ಅಥವಾ ದಾಳಿಗಳನ್ನು ನಡೆಸುತ್ತದೆ ಎಂದು ಭವಿಷ್ಯ ಹೇಳಿದ್ದಾರೆ.

ಮುಂದಿನ ವರ್ಷ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ದೊಡ್ಡ ಆರ್ಥಿಕ ಬಿಕ್ಕಟ್ಟು ಉಂಟಾಗಲಿದೆ. ಹೆಚ್ಚುತ್ತಿರುವ ಸಾಲದ ಮಟ್ಟಗಳು ಮತ್ತು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಂತಹ ಅಂಶಗಳು ಇದಕ್ಕೆ ಕಾರಣಗಳಾಗಿವೆ ಎಂದು ಬಾಬಾ ವಂಗಾ ಎಚ್ಚರಿಸಿದ್ದಾರೆ.

ಮುಂದಿನ ವರ್ಷ ಭಯಾನಕ ಹವಾಮಾನ ಘಟನೆಗಳು ಮತ್ತು ನೈಸರ್ಗಿಕ ವಿಕೋಪಗಳು ಸಂಭವಿಸಲಿವೆ. ಸೈಬರ್ ದಾಳಿಗಳು ಹೆಚ್ಚಾಗುತ್ತವೆ. ಸುಧಾರಿತ ಹ್ಯಾಕರ್‌ಗಳು ಪವರ್ ಗ್ರಿಡ್‌ಗಳು ಮತ್ತು ನೀರಿನ ಸಂಸ್ಕರಣಾ ಘಟಕಗಳಂತಹ ನಿರ್ಣಾಯಕ ಮೂಲಸೌಕರ್ಯಗಳನ್ನು ಗುರಿಯಾಗಿಸುತ್ತಾರೆ. ಇದು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದಿದ್ದಾರೆ.

2024 ರಲ್ಲಿ ಆಲ್ಝೈಮರ್ ಮತ್ತು ಕ್ಯಾನ್ಸರ್ ಸೇರಿದಂತೆ ಗುಣಪಡಿಸಲಾಗದ ಕಾಯಿಲೆಗಳಿಗೆ ಹೊಸ ಚಿಕಿತ್ಸೆಗಳು ಬರಲಿವೆ. ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿ ಪ್ರಮುಖ ಪ್ರಗತಿಯಾಗಲಿದೆ ಎಂದು ಭವಿಷ್ಯವಾಣಿಯಲ್ಲಿ ತಿಳಿಸಿದ್ದಾರೆ.
1911 ರಲ್ಲಿ ಜನಿಸಿದ್ದ ಉತ್ತರ ಮ್ಯಾಸಿಡೋನಿಯಾದಲ್ಲಿ ಜನಿಸಿದ್ದರು. ಅವರು 1996 ರಲ್ಲಿ ನಿಧನರಾಗಿದ್ದಾರೆ. ಕುರುಡರಾಗಿದ್ದ ಬಲ್ಗೇರಿಯನ್ ಅತೀಂದ್ರಿಯ ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಅವರ ಮರಣದ ನಂತರ ಬಹಳ ಕಾಲ ನಿಜವಾಯಿತು ಎಂದು ಹೇಳಲಾಗುತ್ತದೆ.