ಡೈಲಿ ವಾರ್ತೆ: 09/NOV/2023
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಣಿಯ ಕರ್ನಾಟಕ ಪ್ರೌಢ ಶಾಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಣಿಯ ಕರ್ನಾಟಕ ಪ್ರೌಢ ಶಾಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ನಿವೃತ್ತ ಶಿಕ್ಷಕ ಜಯಾನಂದ ಪೆರಾಜೆ ಮಾತನಾಡಿ ವಿದ್ಯಾರ್ಥಿಗಳು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ನಾಗರಿಕರಾಗಿ ಜೀವನ ಮುನ್ನಡೆಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಡಾ. ಮನೋಹರ್ ರೈ ಉದ್ಘಾಟಿಸಿ ಶುಭ ಹಾರೈಸಿದರು. ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ, ಶಾಲಾ ಸಂಚಾಲಕ ಇಬ್ರಾಹಿಂ ಕೆ.ಮಾಣಿ ಅಧ್ಯಕ್ಷತೆ ವಹಿಸಿದ್ದರು.
ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಮುಖ್ಯ ಶಿಕ್ಷಕ ಎಸ್. ಚೆನ್ನಪ್ಪ ಗೌಡ, ಶಿಕ್ಷಕಿ ಜಯಲಕ್ಷ್ಮಿ, ಶ್ಯಾಮಲ ಕೆ.,ಸುಶ್ಮಿತಾ ಉಪಸ್ಥಿತರಿದ್ದರು.
ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಸ್ವಾಗತಿಸಿ, ಶಿಕ್ಷಕ ಎನ್. ಗಂಗಾಧರ ಗೌಡ ವಂದಿಸಿದರು, ಜಯರಾಮ ಕಾಂಚನ ಕಾರ್ಯಕ್ರಮ ನಿರೂಪಿಸಿದರು. ಯೋಜನೆಯ ಸೇವಾ ಪ್ರತಿನಿಧಿ ಲೈಲಾಬಿ ಸಹಕರಿಸಿದರು.