🔽🔽🔽🔽🔽🔽🔽

ಡೈಲಿ ವಾರ್ತೆ: 13/NOV/2023

ನೇಜಾರು ಕೊಲೆ ಆರೋಪಿಯನ್ನು ಶೀಘ್ರ ಬಂಧಿಸಿ, ತಕ್ಕ ಶಿಕ್ಷೆ ನೀಡಲು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಸಿ.ಎಚ್ ಅಬ್ದುಲ್ ಮುತಾಲಿ,ವಂಡ್ಸೆ ಆಗ್ರಹ.

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬಿಳಿಸಿದ್ದು ಹಾಡು ಹಗಲು ಈ ಕೃತ್ಯ ನಡೆದಿರುವುದು ಮನುಷ್ಯ ಸಮಾಜವನ್ನು ನಾಚಿಸುವ ಕೃತ್ಯವಾಗಿದ್ದು ದುಷ್ಕರ್ಮಿಗಳಿಗೆ ಕಾನೂನಿನ ಭಯವೇ ಇಲ್ಲದಂತಿದ್ದು ಈ ಪ್ರಕರಣಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಅಬ್ದುಲ್ ಮುತಾಲಿ ಆಗ್ರಹಿಸಿದ್ದಾರೆ

ಇಂತಹ ಪ್ರಕರಣಗಳು ಜನರಲ್ಲಿ ಸಹಜವಾಗಿ ಆತಂಕ ಸೃಷ್ಟಿಸುತ್ತದೆ ಹಾಗಾಗಿ ಉಡುಪಿ ಜಿಲ್ಲೆಯ ಜನತೆ ಯಾವುದೇ ವದಂತಿಗಳಿಗೆ ಕಿವಿ ಕೊಡದೆ ಆರೋಪಿಯ ಪತ್ತೆಗೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಆದಷ್ಟು ಶೀಘ್ರ ಆರೋಪಿಗಳನ್ನು ಪೊಲೀಸ್ ಇಲಾಖೆ ಸೆರೆಹಿಡಿದು ಸೂಕ್ತ ಕಾನೂನು ಕ್ರಮ ಕೈಗೊಂಡು ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಮುತಾಲಿ, ವಂಡ್ಸೆ ಒತ್ತಾಯಿಸಿರುತ್ತಾರೆ