ಡೈಲಿ ವಾರ್ತೆ: 15/NOV/2023
ಮಕ್ಕಳ ದಿನಾಚರಣೆ ಪ್ರಯುಕ್ತ “ಮಕ್ಕಳೊಂದಿಗೆ ಒಂದು ದಿನ ವಿಶೇಷ ಕಾರ್ಯಕ್ರಮ”
ಬಂಟ್ವಾಳ : ಮಕ್ಕಳನ್ನು ಕೇವಲ ಪಠ್ಯಕ್ಕೆಮಾತ್ರ ಸೀಮಿತಗೊಳಿಸದೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರಣೆ ನೀಡಿ ಅವರ ಆಸಕ್ತಿದಾಯಕ ಕ್ಷೇತ್ರದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಬೇಕು ಎಂದು
ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಅಧ್ಯಕ್ಷ ಸುಕುಮಾರ್ ಬಂಟ್ವಾಳ ಹೇಳಿದರು.
ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ “ಮಕ್ಕಳೊಂದಿಗೆ ಒಂದು ದಿನ” ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಬಂಟ್ವಾಳ ತಾಲೂಕು ಕುಲಾಲ ಕುಂಬಾರ ಯುವ ವೇದಿಕೆಯ ಮಹಿಳಾ ಸಂಘಟನಾ ಅಧ್ಯಕ್ಷ ವಿಜಯಶ್ರೀ ಮಕ್ಕಳ ದಿನಾಚರಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದೇ ವೇಳೆ ಶಾಲಾ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ವಿವಿದ ರೀತಿಯ ಮನರಂಜನ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿತ್ತು ಮತ್ತು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ, ಶಿಕ್ಷಕರುಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ವರ್ಷ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನಾ ಒಕ್ಕೂಟವನ್ನು ಶಾಲೆಯ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು,
ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಅಧ್ಯಕ್ಷ ನಿತೇಶ್ ಪಲ್ಲಿಕಂಡ, ಗೌರವಾಧ್ಯಕ್ಷ ನಾರಾಯಣ ಬಂಟ್ವಾಳ, ಮಹಿಳಾ ವಿಭಾಗಿಯ ಕೋಶಾಧಿಕಾರಿ ವಿಠಲ ಪಲ್ಲಿಕಂಡ, ಜೊತೆ ಕಾರ್ಯದರ್ಶಿ ಪುನೀತ್ ಕಾಮಾಜೆ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ವಿಶ್ವನಾಥ್ ಮೂಲ್ಯ, ಶಾಲಾ ನಾಯಕಿ ತ್ರಿಷಾ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿ, ಸಂಘಟನೆಯ ಕಾರ್ಯದರ್ಶಿ ಕಾರ್ತಿಕ್ ಬಂಟ್ವಾಳ ವಂದಿಸಿದರು. ಸಹ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರೂಪಿಸಿದರು.