ಡೈಲಿ ವಾರ್ತೆ: 18/NOV/2023

3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯ ಬಂಧನ.!

ಬಂಟ್ವಾಳ : ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ಝೈನುದ್ದೀನ್ ಬಂಧಿತ ಆರೋಪಿ.

ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಉಂಟು ಮಾಡುತ್ತಿದ್ದ ಕಾರಣಕ್ಕಾಗಿ 2021 ರ ಡಿ. 21 ರಂದು ಈತನ ಮೇಲೆ ಪ್ರಕರಣ ದಾಖಲಾಗಿತ್ತು.
ಬಳಿಕ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಬಂಟ್ವಾಳ ಗ್ರಾಮಾಂತರ ನಿರೀಕ್ಷಕ ಶಿವಕುಮಾರ್ ಹಾಗೂ ಉಪ ನಿರೀಕ್ಷರುಗಳಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರಾಧಕೃಷ್ಣ , ಪುನೀತ್ ಮತ್ತು ನಾಗನಾಥ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.