ಡೈಲಿ ವಾರ್ತೆ: 19/NOV/2023
ಬೆಸ್ಕಾಂ ನಿರ್ಲಕ್ಷ್ಯ: ರಸ್ತೆ ಬದಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ-ಮಗಳು ಸಾವು
ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ನ ಕಾಡುಗೋಡಿಯಲ್ಲಿ ನಡೆದಿದೆ.
ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ.
ತಾಯಿ ಹಾಗೂ ಮಗಳು ತಮಿಳುನಾಡಿನಿಂದ ಬೆಂಗಳೂರಿನ ಮನೆಗೆ ಬತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದಿದ್ದಾರೆ. ರಸ್ತೆ ಬದಿ ತಂತಿ ತುಂಡಾಗಿ ನೆಲದಲ್ಲಿ ಬಿದ್ದಿತ್ತು. ಕತ್ತಲಲ್ಲಿ ತಂತಿ ಕಾಣಿಸದೇ ಹೋಗಿದ್ದರಿಂದ ಅದನ್ನು ತುಳಿದಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.