ಡೈಲಿ ವಾರ್ತೆ: 19/NOV/2023

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಕೊಟ್ಟಾಯಂ: 45 ವರ್ಷ ವಯಸ್ಸಿನ ಮಲಯಾಳಂ ನಟ ವಿನೋದ್ ಥಾಮಸ್ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ.

ತನ್ನ ಆವರಣದಲ್ಲಿ ದೀರ್ಘಕಾಲದಿಂದ ನಿಲ್ಲಿಸಿದ ಕಾರಿನೊಳಗೆ ವ್ಯಕ್ತಿಯೊಬ್ಬರಿದ್ದಾರೆಂದು ಹೋಟೆಲ್ ಆಡಳಿತವು ಪೊಲೀಸರಿಗೆ ತಿಳಿಸಿದ ನಂತರ, ವಿನೋದ್ ಥಾಮಸ್ ಸಾವಿಗೆ ಘಟನೆಗೆ ಬೆಳಕಿಗೆ ಬಂದಿದೆ.

“ಅವರನ್ನು ಕಾರಿನೊಳಗೆ ನಾವು ಪತ್ತೆ ಮಾಡಿದೆವು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದೇವೆ. ವೈದ್ಯರು ಅವನನ್ನು ಪರೀಕ್ಷಿಸಿದ ನಂತರ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ” ಎಂದು ಪೊಲೀಸರು ಹೇಳಿದರು.

ವಿನೋದ್ ಥಾಮಸ್ ಸಾವಿನ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗಿಲ್ಲ. ವಿವಿಧ ವರದಿಗಳ ಪ್ರಕಾರ, ಕಾರಿನ ಎಸಿಯಿಂದ ವಿಷಕಾರಿ ಅನಿಲವನ್ನು ಉಸಿರಾಡಿದ್ದರಿಂದ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಈ ಬಗ್ಗೆ ಖಚಿತ ಮಾಹಿತಿ ದೊರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಥಾಮಸ್ ಅವರು ‘ಅಯ್ಯಪ್ಪನುಮ್ ಕೊಶ್ಯುಮ್’, ‘ನಾಥೋಲಿ ಒರು ಚೆರಿಯ ಮೀನಲ್ಲಾ’, ‘ಒರು ಮುರೈ ವಂತ್ ಪಾಥಾಯ’, ‘ಹ್ಯಾಪಿ ವೆಡ್ಡಿಂಗ್’ ಮತ್ತು ‘ಜೂನ್’ ಮುಂತಾದ ಚಲನಚಿತ್ರಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾಗಿದ್ದಾರೆ.