ಡೈಲಿ ವಾರ್ತೆ: 26/NOV/2023
ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: ಶಾಲಾ ವಾರ್ಷಿಕೋತ್ಸವ
ತೆಕ್ಕಟ್ಟೆ : ವಿಶ್ವ ವಿನಾಯಕ ಸಿ.ಬಿ.ಎಸ್.ಇ ಶಾಲಾ 18 ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಜೆಕಾರ್ ಪದ್ಮ ಗೋಪಾಲ್ ಟ್ರಸ್ಟ್, ಜ್ಞಾನ ಸುಧಾ ವಿದ್ಯಾಸಂಸ್ಥೆಗಳ ಆಡಳಿತ ಮುಖ್ಯಸ್ಥರಾದ ಡಾ. ಸುಧಾಕರ ಶೆಟ್ಟಿಯವರು ದೀಪ ಬೆಳಗುವುದರ ಮೂಲಕ ಕಾರ‍್ಯಕ್ರಮ ಉದ್ಘಾಟಿಸಿದರು.
ವಿದ್ಯೆಯಿಂದ ವಿನಯಶೀಲರಾಗಿ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಮಕ್ಕಳು ಮನೆಯಲ್ಲಿ ತಂದೆ ತಾಯಿಯಿಂದ ಸಂಸ್ಕಾರ ಕಲಿಯುತ್ತಾರೆ ತಂದೆ ತಾಯಿಗಳು ಹಾಗೂ ಗುರು ಹಿರಿಯರು ಮಕ್ಕಳಿಗೆ ಆದರ್ಶರೂಪವಾಗಿದ್ದರೆ ನಾವು ಉತ್ತಮ ಸಮಾಜವನ್ನು ಕಟ್ಟಬಹುದು ಎಂದು ತಿಳಿಸಿದರು. ವ್ಯಕ್ತಿ ತನ್ನ ಭವಿಷ್ಯವನ್ನು ತಾನೇ ರೂಪಿಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಮುನ್ನಡೆಯಬೇಕು ಎಂದು ತಿಳಿಸಿದರು.
ಕಾರ‍್ಯಕ್ರಮದ ಗೌರವ ಅತಿಥಿಗಳಾದ ಶಾಲಾ ಮ್ಯಾನೇಜಿಂಗ್ ಟ್ರಸ್ಟಿ ರತ್ನಾಕರ ಶೆಟ್ಟಿಯವರು ಕೃತಕ ಬುದ್ಧಿಮತ್ತೆಯ ವಿಷಯದ ಕುರಿತು ಮಾತನಾಡಿನಾಡಿದರು. ಇಂದಿನ ವೈಜ್ಞಾನಿಕ ಯುಗದಲ್ಲಿ ಮಕ್ಕಳಿಗೆ ಇದರ ಕುರಿತು ಅರಿವು ಮೂಡಿಸುವುದು ಅನಿವಾರ‍್ಯವಾಗಿದೆ ಎಂದರು.
ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಮಾತನಾಡಿ ಪೋಷಕರ ಸಹಕಾರಕ್ಕೆ ಧನ್ಯವಾದಗಳನ್ನು ತಿಳಿಸಿದರು.
ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಎಮ್. ಪ್ರಭಾಕರ ಶೆಟ್ಟಿಯವರು ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಮ್ಯಾನೇಜಿಂಗ್ ಟ್ರಸ್ಟಿ ಬಿ. ಸೀತಾರಾಮ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾರವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಟ್ರಸ್ಟಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ವರ್ಗ ಹಾಗೂ ಪೋಷಕರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಶಾಲಾ ಮಕ್ಕಳಿಂದ ವಿವಿಧ ಮನೋರಂಜನಾ ಕಾರ‍್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಸಂಸ್ಥೆಯ ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ ವರದಿ ವಾಚಿಸಿ, ಶ್ರೀ ವೈಷ್ಣವಿ ಸ್ವಾಗತಿಸಿ, ಪರಿಚಯಿಸಿ, ಮಿಥಾಲಿ ಹಾಗೂ ಅಲಿಜಾ ನಿರೂಪಿಸಿ, ಬ್ರಾಹ್ಮಿ ಶೆಟ್ಟಿ ವಂದಿಸಿದರು.