ಡೈಲಿ ವಾರ್ತೆ: 27/NOV/2023
ತಂದೆ ಮತ್ತು ಮಗನಿಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವು.!
ಚಿಕ್ಕೋಡಿ: ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತುಳಿದು ತಾಯಿ ಹಾಗೂ ಮಗು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಅಥಣಿಯಲ್ಲಿ ತಂದೆ ಮತ್ತು ಮಗನಿಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32) ಹಾಗೂ ಪ್ರೀತಮ್ ಮಲ್ಲಿಕಾರ್ಜುನ ಪೂಜಾರಿ (7) ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಭಾನುವಾರ ಮಧ್ಯಾಹ್ನ ಮಲ್ಲಿಕಾರ್ಜುನ ತೋಟದಲ್ಲಿ ಬೋರ್ವೆಲ್ ಮೋಟಾರ್ ಆನ್ ಮಾಡಿ ಬೇರೆ ಕಡೆ ನೀರು ತಿರುವಿಗೆ (ವಾಲ್ ಟರ್ನ್) ಮುಂದಾಗಿದ್ದಾರೆ.
ಆದರೆ ಬೋರ್ವೆಲ್ ಹತ್ತಿರ ವೈರ್ ತುಂಡಾಗಿದ್ದು ಗಮನಿಸದೇ ವಿದ್ಯುತ್ ಕೈಗೆ ತಗುಲಿ ಸಾವು ಸಂಭವಿಸಿದೆ. ಅಪ್ಪನನ್ನು ಉಳಿಸಲು ಹೋಗಿ ಮಗ ಪ್ರೀತಮ್ ಕೂಡ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.