



ಡೈಲಿ ವಾರ್ತೆ: 28/NOV/2023


ಅಪರಿಚಿತ ವಾಹನ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!
ವಿಜಯನಗರ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯನಗರದ ಹಗರಿಬೊಮ್ಮನಹಳ್ಳಿಯ ಮಾಲ್ವಿ ಗ್ರಾಮದ ಬಳಿ ನಡೆದಿದೆ.
ಶಿವಕುಮಾರ್ (36) ಮೃತ ದುರ್ದೈವಿ. ಹಿಂಬದಿಯಿಂದ ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಗಂಭೀರ ಗಾಯಗೊಂಡ ಶಿವಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸೋಮವಾರ ತಡರಾತ್ರಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.