ಡೈಲಿ ವಾರ್ತೆ: 03/DEC/2023
ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ
ಭೋಪಾಲ್: ನಾಲ್ಕು ರಾಜ್ಯಗಳ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ (BJP) ಭಾರೀ ಮುನ್ನಡೆ ಸಾಧಿಸಿದೆ.
ಬೆಳಗ್ಗೆ 9 :15ರ ಟ್ರೆಂಡ್ ಪ್ರಕಾರ ಬಿಜೆಪಿ 126, ಕಾಂಗ್ರೆಸ್ 89, ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಪೋಸ್ಟಲ್ ವೋಟ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನೆಕ್ -ಟು- ನೆಕ್ ಫೈಟ್ ಇತ್ತು.
ಮಧ್ಯಪ್ರದೇಶದಲ್ಲಿ ಒಟ್ಟು 230 ಸ್ಥಾನಗಳಿದ್ದು ಬಹುಮತಕ್ಕೆ 116 ಸ್ಥಾನ ಅಗತ್ಯವಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಬಿಎಸ್‌ಪಿ 2, ಸಮಾಜವಾದಿ ಪಕ್ಷ 1 ಸ್ಥಾನ ಗೆದ್ದುಕೊಂಡರೆ 4 ಮಂದಿ ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದರು. ಬಿಎಸ್‌ಪಿ, ಎಸ್‌ಪಿ ಹಾಗೂ ಪಕ್ಷೇತರರ ಬೆಂಬಲದಿಂದ ಕಾಂಗ್ರಸ್ ಸರ್ಕಾರ ರಚನೆ ಮಾಡಿತ್ತು. ಕಮಲ್ ನಾಥ್ ಸಿಎಂ ಆಗಿದ್ದರು. ಲೋಕಸಭಾ ಚುನಾವಣೆ ಬಳಿಕ ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರ ಹಿಡಿದಿತ್ತು.