ಡೈಲಿ ವಾರ್ತೆ: 04/DEC/2023
ಡಿ.23ರಂದು ನಿಗದಿಯಾಗಿದ್ದ ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ
ಬೆಂಗಳೂರು: ಡಿ.23ರಂದು ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳು ಅಂದರೆ 2024ರ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ.
ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಿ ಗೃಹ ಸಚಿವ ಡಾ.ಪರಮೇಶ್ವರ್ ಮರು ಪರೀಕ್ಷೆ ದಿನಾಂಕ ಪ್ರಕಟಿಸಿದ್ದಾರೆ. PSI ಮರು ಪರೀಕ್ಷೆ ಮುಂದೂಡುವಂತೆ ಆಡಳಿತ, ವಿಪಕ್ಷ ಸದಸ್ಯರು ಆಗ್ರಹಿಸಿದ್ದರು. ಹಾಗಾಗಿ ಜ.23ರಂದು ಎಲ್ಲಾ 54,233 ಅಭ್ಯರ್ಥಿಗಳು ಬೆಂಗಳೂರಲ್ಲೇ ಪಿಎಸ್ಐ ಮರು ಪರೀಕ್ಷೆ ಬರೆಸಲು ನಿರ್ಧಾರ ಮಾಡಲಾಗಿದೆ.
ಈ ಕುರಿತಾಗಿ ಬೆಳಗಾವಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ. ಪರಮೇಶ್ವರ್, PSI ಪರೀಕ್ಷೆ ಸಮಯಾವಕಾಶ ಬೇಕು ಎಂದು ಪರೀಕ್ಷಾರ್ಥಿಗಳು ಮನವಿ ಮಾಡಿದ್ದರು. ಹಾಗಾಗಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. ಸದನದಲ್ಲಿ ಯತ್ನಾಳ್ ಈ ವಿಚಾರವನ್ನ ಪ್ರಸ್ತಾಪ ಮಾಡಿದ್ದಾರೆ. ಅನೇಕ ಶಾಸಕರುಗಳು ಪಕ್ಷಾತೀತವಾಗಿ ಬೇಡಿಕೆಯನ್ನ ಇಟ್ಟಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿ ಒಂದು ತಿಂಗಳ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ.
ದಿನಾಂಕವನ್ನ ಶೀಘ್ರದಲ್ಲೇ ಪ್ರಕಟಿಸಲಾಗುವುದು. KEA ಕ್ಯಾಲೆಂಡರ್ ನೋಡಿಕೊಂಡು ದಿನಾಂಕ ಪ್ರಕಟ ಮಾಡುತ್ತೇವೆ. 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ತಯಾರಿ ಮಾಡಿಕೊಂಡು ಬರೆಯಿರಿ ಎಂದು ಹೇಳಿದ್ದಾರೆ.