ಡೈಲಿ ವಾರ್ತೆ: 13/DEC/2023
ರಂಗತರಂಗ ನಾಟಕ ತಂಡದ ಯಜಮಾನ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ!
ಕಾಪು: ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ.
ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಅವರು ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಕಾಪು ರಂಗತರಂಗ ತಂಡದ ಯಜಮಾನ ಆಗಿ ಭಾರೀ ಜನಪ್ರಿಯತೆ ಪಡೆದಿದ್ದರು.
ಅಶಕ್ತರ ನೆರವಿಗೆ ಧಾವಿಸುವ ಅವರು ಯಾವಾಗಲೂ ಸಮಾಜದ ಪರವಾಗಿ ಕಾಳಜಿ ಹೊಂದಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಅತ್ಯಂತ ಆಪ್ತರಾಗಿದ್ದ ಅವರು ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕ, ಅತ್ಯುತ್ತಮ ನಟ ಮತ್ತು ನಿರ್ದೇಶಕ ಆಗಿದ್ದರು.
ಇತ್ತೀಚಿನ ಕೆಲ ವರ್ಷಗಳಿಂದ ಹಣಕಾಸಿನ ತೊಂದರೆಯಲ್ಲಿದ್ದರು ಎನ್ನುವುದು ಅವರ ಆಪ್ತ ವಲಯದಿಂದ ಕೇಳಿಬಂದಿದೆ. ಮಾತ್ರವಲ್ಲದೆ ಪತ್ನಿ ವಸುಂಧರ ಶೆಟ್ಟಿ ಅವರು ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದರು ಎನ್ನಲಾಗಿದೆ.
ಆತ್ಮಹತ್ಯೆಗೆ ಕಾರಣ ಏನೆಂಬುದು ಸದ್ಯಕ್ಕೆ ಗೊತ್ತಾಗಿಲ್ಲ.