ಡೈಲಿ ವಾರ್ತೆ: 16/DEC/2023
ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ
ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ
ಉಡುಪಿ: ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ
ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ.
ನಾಪತ್ತೆಯಾದ ವ್ಯಕ್ತಿ ಕೊಡವೂರು ಗ್ರಾಮದ ಶಿವುಕುಮಾರ (35) ಎಂದು ತಿಳಿಯಲಾಗಿದೆ. ಇವರಿಗೆ ವಿಪರೀತ ಕುಡಿತದ ಚಟವಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿ ವಿಚಿತ್ರವಾಗಿ ವರ್ತಿಸುತ್ತಿದ್ದ ಕಾರಣ ಅವರನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಗ್ಗೆ ಒಳರೋಗಿಯಾಗಿ ದಾಖಲಿಸಿದ್ದು ಡಿ.11 ರಂದು ಬೆಳಿಗ್ಗೆ ಆಸ್ಪತ್ರೆಯಿಂದ ಯಾರಿಗೂ ಹೇಳದೇ ಹೊರಗೆ ಹೋದವರು ವಾಪಸ್ಸು ಆಸ್ಪತ್ರೆಗೂ ಬಾರದೇ, ಮನೆಗೂ ಹೋಗದೆ ಹಾಗೂ ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿರುತ್ತಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ.