



ಡೈಲಿ ವಾರ್ತೆ: 25/DEC/2023


ಎಣ್ಣೆ ವಿಚಾರಕ್ಕೆ ಗಲಾಟೆ – ಕೊಲೆಯಲ್ಲಿ ಅಂತ್ಯ
ರಾಮನಗರ: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯು ತಲೆ ಮೇಲೆ ಕಲ್ಲು ಹಾಕಿ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕನಕಪುರ ತಾಲೂಕಿನ ಕಲ್ಕೆರೆ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಬೆಂಗಳೂರು ಮೂಲದ ದೀಪಕ್ (23) ಎಂದು ಗುರುತಿಸಲಾಗಿದೆ.
ಎಣ್ಣೆ ವಿಚಾರಕ್ಕೆ ಗಲಾಟೆ ನಡೆದಿದ್ದು ಕಿಡಿಗೇಡಿಗಳು ರಾತ್ರಿ ಮಲಗಿದ್ದ ವೇಳೆ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಕನಕಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಕನಕಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.