ಡೈಲಿ ವಾರ್ತೆ: 30/DEC/2023

ಅಪಾರ್ಟ್‌ಮೆಂಟ್‌ ನ 33ನೇ ಮಹಡಿಯಿಂದ ಬಿದ್ದು ಸಾಫ್ಟ್ ವೇರ್ ಇಂಜಿನಿಯರ್ ಮೃತ್ಯು!

ಬೆಂಗಳೂರು: ಸಾಫ್ಟ್ ವೇರ್ ಇಂಜಿನಿಯರ್ ಯುವಕನೊಬ್ಬ ಅಪಾರ್ಟ್‌ಮೆಂಟ್‌ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕೆ.ಆ‌ರ್ ಪುರದ ಅಯ್ಯಪ್ಪನಗರದಲ್ಲಿ ನಿನ್ನೆ ಡಿ. 29 ರಂದು ನಡೆದಿದೆ.

ಮೃತನನ್ನು ದಿಪಾಂಶು ಶರ್ಮಾ ಎಂದು ಗುರುತಿಸಲಾಗಿದೆ.
ಈ ಘಟನೆ ಶುಕ್ರವಾರ ಬೆಳಗ್ಗೆ 6.45ರ ಸುಮಾರಿಗೆ ಬೆಂಗಳೂರಿನ ಕೆಆರ್ ಪುರ ಬಳಿಯ ಕೊಡಿಗೇಹಳ್ಳಿಯಲ್ಲಿ ನಡೆದಿದೆ.

ದಿಪಾಂಶು ಶರ್ಮಾ ತನ್ನ ಸ್ನೇಹಿತರ ಜೊತೆಗೆ ಪಾರ್ಟಿ ಮಾಡುತ್ತಿದ್ದ. ಇದೇ ಸಂದರ್ಭಲ್ಲಿ ಸಿಗರೇಟ್ ಸೇದಲೆಂದು ಟೆಕ್ಕಿ ಬಾಲ್ಕನಿಗೆ ತೆರಳಿದ್ದನು. ಈ ವೇಳೆ ಆಯತಪ್ಪಿ ಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.