ಡೈಲಿ ವಾರ್ತೆ: 30/DEC/2023
ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ಉಡುಪಿ:ಉಡುಪಿ ಜಿಲ್ಲೆಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಇಂದು(ಡಿ.30) ತಿರಸ್ಕರಿಸಿದೆ.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14ರಂದು ವಕೀಲ ಕೆ.ಎಸ್.ಎನ್. ರಾಜೇಶ್ ಮೂಲಕ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿದ್ದರು.
ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.