ಡೈಲಿ ವಾರ್ತೆ: 02/JAN/2024
ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬುಲೆನ್ಸ್
ಉಡುಪಿ: ಮಣಿಪಾಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಜ. 2 ರಂದು ಮಂಗಳವಾರ ಬೆಳಿಗ್ಗೆ ನಡೆದಿದೆ.
ಚಾಲಕನೋರ್ವ ಆಂಬುಲೆನ್ಸ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಲಕ್ಷ್ಮೀಂದ್ರ ನಗರದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಇದರಿಂದಾಗಿ ಪಕ್ಕದ ಅಂಗಡಿಗಳಿಗೂ ಹಾನಿಯಾಗಿರುತ್ತದೆ. ಅಲ್ಲದೆ
ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ ಯಾರು ಇರಲಿಲ್ಲ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.