ಡೈಲಿ ವಾರ್ತೆ: 05/JAN/2024

ಕೋಟ ಗ್ರಾ. ಪಂ. ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 2, 50ಲಕ್ಷ ಸಹಾಯಧನ ಚಕ್ ವಿತರಣೆ

ಕೋಟ: ಕೋಟ ಗ್ರಾಮ ಪಂಚಾಯತ್ ಪರಿಶಿಷ್ಟ ಜಾತಿ ಪಂಗಡದವರಿಗೆ ಆರೋಗ್ಯ ಮಾಹಿತಿ, ಕಾನೂನು ಮಾಹಿತಿ ಶಿಬಿರ ಮತ್ತು ಸೌಲಭ್ಯ ವಿತರಣಾ ಕಾರ್ಯಕ್ರಮ ಶುಕ್ರವಾರ ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಜರಗತು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 2,50ಲಕ್ಷ ಸಹಾಯಧನ ಚಕ್ ವಿತರಿಸಲಾಯಿತು. ಆರೋಗ್ಯ ಮಾಹಿತಿಯನ್ನು ಕೋಟ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ ಮಾಧವ್ ಪೈ ನೀಡಿದರು.

ಕಾನೂನುಗಳ ಬಗ್ಗೆ ಕೋಟ ಪೋಲಿಸ್ ಠಾಣೆಯ ಎಎಸ್‌ಐ ಗೋಪಾಲ್ ಪೂಜಾರಿ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಷ್ ಕುಮಾರ್ ಶೆಟ್ಟಿ ಸಂವಿಧಾನ ಹಾಗೂ ಪರಿಶಿಷ್ಟ ಜಾತಿ ಪಂಗಡದವರಿಗೆ ಸರಕಾರಿ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ,ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶೇಖರ್ ಗಿಳಿಯಾರ್ ಉಪಸ್ಥಿತರಿದ್ದರು ಪಿ.ಡಿಓ ಸುರೇಶ್ ಬಂಗೇರ ಸ್ವಾಗತಿಸಿದರು.ಕಾರ್ಯಕ್ರಮವನ್ನು ಪಂಚಾಯತ್ ಕಾರ್ಯದರ್ಶಿ ಶೇಖರ್ ಮರವಂತೆ ನಿರೂಪಿಸಿದರು.