



ಡೈಲಿ ವಾರ್ತೆ: 06/JAN/2024


ಹುಬ್ಬಳ್ಳಿ: ಕಾರು, ಲಾರಿಗಳ ನಡುವೆ ಭೀಕರ ಸರಣಿ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು
ಹುಬ್ಬಳ್ಳಿ: ಲಾರಿ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟು ಮೂರು ಜನ ಗಾಯಗೊಂಡು ಘಟನೆ ರಾಷ್ಟ್ರೀಯ ಹೆದ್ದಾರಿಯ ಬೆಳ್ಳಿಗಟ್ಟಿ ಕ್ರಾಸ್ ಬಳಿಯಲ್ಲಿ ಇಂದು ಶನಿವಾರ ನಸುಕಿನ ಜಾವದಲ್ಲಿ ನಡೆದಿದೆ.
ಬೆಂಗಳೂರಿನಿಂದ ಶಿರಡಿ ಹಾಗೂ ಗೋವಾಕ್ಕೆ ಹೊರಟಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಎರಡು ಕಾರಿನಲ್ಲಿದ್ದ 7 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು ಆಗ ಅದರಲ್ಲಿ ಮೂವರು ಜನರನ್ನು 108 ಆಂಬ್ಯುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ,ಇನ್ನುಳಿದ ನಾಲ್ಕು ಜನ ರಸ್ತೆಯ ಪಕ್ಕದಲ್ಲಿ ಮಾತನಾಡುತ್ತಾ ನಿಂತಿದ್ದಾರೆ.
ಆಗ ಹಾವೇರಿ ಕಡೆಯಿಂದ ಬಂದ ಲಾರಿ ರಸ್ತೆಯ ಪಕ್ಕದಲ್ಲಿ ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಪಕ್ಕದಲ್ಲೇ ನಿಂತಿದ್ದ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಹಾಗೂ ಕುಂದಗೋಳ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವಗಳನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ.