ಡೈಲಿ ವಾರ್ತೆ: 06/JAN/2024

ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಕಂದಕಕ್ಕೆ ಉರುಳಿದ ಬಸ್ – ಓರ್ವ ಸಾವು, 25 ಮಂದಿ ಗಂಭೀರ

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25 ಜನ ಗಂಭೀರ ಗಾಯಗೊಂಡ ಘಟನೆ ಸುರಪುರದ ದೇವಾಪುರದ ಬಳಿ ನಡೆದಿದೆ

ಘಟನೆಯಲ್ಲಿ ಹುಮನಬಾದ್‍ನ ಹಳ್ಳಿಖೇಡ ನಿವಾಸಿ ಬಾಲು ಕುಮಾರ್ (36) ಮೃತ ಪ್ರಯಾಣಿಕ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಎಲ್ಲಾ ಗಾಯಾಳುಗಳನ್ನ ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಬೀದರ್‌ನಿಂದ ಬೆಂಗಳೂರಿಗೆ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ತೆರಳುತ್ತಿತ್ತು, ಈ ವೇಳೆ ಅಪಘಾತ ಸಂಭವಿಸಿದೆ.
ಮಿತಿ ಮೀರಿದ ವೇಗದಲ್ಲಿ ಚಲಾಯಿಸಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಬಳಿಕ ಪೊಲೀಸರು ಹಾಗೂ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.