ಡೈಲಿ ವಾರ್ತೆ: 11/Jan/2024

ಬಜಪೆ: ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತು ಗಾಂಜಾ ಸೇವನೆ – ನಾಲ್ವರ ಬಂಧನ

ಬಜಪೆ:ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ ಘಟನೆ ಜ. 9 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿತರು ಉತ್ತರ ಪ್ರದೇಶ ಮೂಲದ ಕೃಷ ಮುರಳಿ, ವಿವೇಕ್ ಸಹನಿ, ರಾಹುಲ್ ಗುಪ್ತ ಮತ್ತು ಆರ್ಯನ್ ಶರ್ಮ ಎಂಬವರನ್ನು ಬಜಪೆ ಪೊಲೀಸ್ ಠಾಣೆಯ ಪಿಎಸ್ಐ ರವರು ವಶಕ್ಕೆ ಪಡೆದಿದ್ದಾರೆ.

ಇವರು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಜಪೆ, ಮರವೂರು, ಶಾಂತಿಗುಡ್ಡೆ ಮತ್ತು ಇತರ ಕಡೆಗಳಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮಾದಕವಸ್ತು ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುತ್ತದೆ. ಈ ನಾಲ್ಕು ಜನರ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.