



ಡೈಲಿ ವಾರ್ತೆ: 14/Jan/2024




ಕಲಬುರಗಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಪ್ರಯಾಣಿಸುತ್ತಿದ್ದ ಕಾರು ಪಲ್ಟಿ – ಶಾಸಕರಿಗೆ ಗಾಯ
ಕಲಬುರಗಿ: ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ಜ.14ರ ಭಾನುವಾರ ಬೆಳಿಗ್ಗೆ ಸಮೀಪದ ಪಾಳಾ ಗ್ರಾಮದಲ್ಲಿ ಸಂಭವಿಸಿದೆ.
ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿರುವ ಶಾಸಕ ಮತ್ತಿಮಡು ಇಂದು ಬೆಳಿಗ್ಗೆ ಪಾಳಾ ಗ್ರಾಮಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಫಾರ್ಚುನರ್ ಕಾರು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ.
ಶಾಸಕ ಮತ್ತಿಮಡು ಅವರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು, ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ನಂತರವೂ ಮತ್ತಿಮಡು ನಡೆದುಕೊಂಡೇ ಆಸ್ಪತ್ರೆ ಒಳಗೆ ಪ್ರವೇಶಿಸಿದ್ದಾರೆ.
ಎಸ್ಪಿ ಭೇಟಿ: ಶಾಸಕ ಬಸವರಾಜ್ ಮತ್ತಿಮಡು ದಾಖಲಾಗಿರುವ ಖಾಸಗಿ ಆಸ್ಪತ್ರೆಗೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

