ಡೈಲಿ ವಾರ್ತೆ: 20/Jan/2024

ತೆಕ್ಕಟ್ಟೆ: ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು!

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಕೆದೂರು ರೈಲ್ವೆ ಬ್ರಿಡ್ಜ್ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಜ. 20 ರಂದು ಶನಿವಾರ ಸಂಜೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮಲ್ಯಾಡಿ ಕುಷ್ಟ ದೇವಾಡಿಗ (78) ಎಂದು ಗುರುತಿಸಲಾಗಿದೆ.
ಇವರು ಮೂಲತ ಹಳ್ನಾಡಿನವರಾಗಿದ್ದು ಮಲ್ಯಾಡಿಯಲ್ಲಿ ವಾಸವಾಗಿದ್ದರು. ಇವರಿಗೆ 4 ವರ್ಷದ ಹಿಂದೆ ಮೆದಳು ಜ್ವರದಿಂದ ಮಾನಸಿಕ ಅಸ್ವಸ್ಥರಾಗಿದ್ದರು ಎಂದು ತಿಳಿದು ಬಂದಿದೆ. ಇಂದು ಸಂಜೆ ಮನೆಯಿಂದ ಹೊರಗೆ ಹೋದವರು ಸುಮಾರು 5 ಗಂಟೆಗೆ ಕೆದೂರು ರೈಲ್ವೆ ಬ್ರಿಡ್ಜ್ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇವರ ದೇಹವು ಛಿದ್ರ ಛಿದ್ರಗೊಂಡಿದೆ.
ವಿಷಯ ತಿಳಿದ ತಕ್ಷಣ ಕೋಟ ಪೊಲೀಸ್ ಠಾಣಾಧಿಕಾರಿ ತೇಜಸ್ವಿ, ಎಎಸ್ಐ ರವಿ ಕುಮಾರ್, ಹೆಡ್ ಕಾನ್ಸ್ಟೇಬಲ್ ಗಣೇಶ್ ಹಾಗೂ ರಾಘವೇಂದ್ರ ಶೆಟ್ಟಿ ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋಟ ಜೀವನ್ ಮಿತ್ರ ನಾಗರಾಜ್ ಪುತ್ರನ್ ರವರು ಛಿದ್ರಗೊಂಡಿದ್ದ ಮೃತ ದೇಹವನ್ನು ಎತ್ತಿ ಗೋಣಿ ಚೀಲಕ್ಕೆ ತುಂಬಿ ಆಸ್ಪತ್ರೆಗೆ ಸಾಗಿಸಿರುತ್ತಾರೆ.