ಡೈಲಿ ವಾರ್ತೆ: 26/Jan/2024
ಮಗನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ತಂದೆ
ಬೆಂಗಳೂರು: ವ್ಯಕ್ತಿಯೊಬ್ಬರು ಮಗನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ದಾರುಣ ಘಟನೆ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್ನ ಮನೆಯೊಂದರಲ್ಲಿ ಸುರೇಶ್ ಎಂಬವರು ಮಗ ನರ್ತನ್ ಬೋಪಣ್ಣ (32) ಅವರನ್ನು ಕೊಲೆ ಮಾಡಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಮನೆಗೆ ತೆರಳಿದ್ದರು. ಈ ವೇಳೆ ನರ್ತನ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ. ಜೀವನ್ಮರಣ ಸ್ಥಿತಿಯಲ್ಲಿದ್ದ ನರ್ತನ್ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ದುರಾದೃಷ್ಟವಶಾತ್, ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ಸದ್ಯ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಯ ಹಿಂದಿನ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.