



ಡೈಲಿ ವಾರ್ತೆ: 26/Jan/2024


ವರದಿ: ಅಬ್ದುಲ್ ರಶೀದ್ ಮಣಿಪಾಲ
ಮಲ್ಪೆ: ಸ್ಕೂಟಿಗೆ ಬಸ್ ಡಿಕ್ಕಿ- ಓರ್ವ ಸಾವು ಮತ್ತೋರ್ವ ಗಂಭೀರ ಗಾಯ
ಉಡುಪಿ: ನಗರದ ಮಲ್ಪೆ ರಸ್ತೆಯ ಪಂದುಬೆಟ್ಟು ಸಮೀಪ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದಾನೆ, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಆಕ್ಟೀವ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಗಂಭೀರ ಗಾಯಗೊಂಡ ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಘಟನೆ ಸ್ಥಳಕ್ಕೆ ಉಡುಪಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.