ಡೈಲಿ ವಾರ್ತೆ: 28/Jan/2024
ಕೋಟತಟ್ಟು ಗ್ರಾ. ಪಂ. ನಲ್ಲಿ ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ
ಕೋಟ: ಭಾರತ ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವನ್ನು ಕೋಟತಟ್ಟು ಗ್ರಾಮ ಪಂಚಾಯತ್ ನ ಕಾರಂತ ಥೀಂ ಪಾರ್ಕ್ನಲ್ಲಿ ದಿನಾಂಕ 28-01-2024ರ ಭಾನುವಾರದಂದು ಅಧ್ಯಕ್ಷರಾದ ಕೆ ಸತೀಶ್ ಕುಂದರ್ ಬಾರಿಕೆರೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸದಸ್ಯರಾದ ವಾಸು ಪೂಜಾರಿ ಅವರು ಸಂವಿಧಾನದ ಪೀಠಿಕೆಯ ಜಾಗೃತಿ ನುಡಿ ವಾಚಿಸಿದರು.
ಅಧ್ಯಕ್ಷರಾದ ಕೆ ಸತೀಶ್ ಕುಂದರ್ ಬಾರಿಕೆರೆ ಅವರು ಮಾತನಾಡಿ “ಸಂವಿಧಾನವು ಜನತೆಯ ಹಕ್ಕುಗಳ ಮೂಲವಾಗಿದೆ, ವಿಶ್ವದ ಧೀರ್ಘ ಸಂವಿಧಾನವು ನಮ್ಮದು ಹಾಗೂ ನಮ್ಮ ಸಂವಿಧಾನದ ಸೌಂದರ್ಯವೇ ಸಮಾನತೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ರಾಬರ್ಟ್ ರೋಡ್ರಿಗಸ್, ಶ್ರೀಮತಿ ಸಾಹಿರಾ ಬಾನು, ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್, ಕೋಟ ಪಶು ವೈದ್ಯಾಧಕಾರಿಗಳಾದ ಅನಿಲ್ ಕುಮಾರ್ ಎಚ್, ಸಮಾಜ ಕಲ್ಯಾಣ ಇಲಾಖೆಯ ಗುರುರಾಜ್, ಕೊರಗ ಮುಖಂಡರಾದ ಗಣೇಶ್, ಕೋಟ ಗ್ರಾಮ ಪಂಚಾಯತ್ ಲೆಕ್ಕ ಸಹಾಯಕರಾದ ಶೇಖರ್ ಮರವಂತೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಿಂಧೂರ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಸಾರ್ವಜನಿಕರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವೀಂದ್ರ ರಾವ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.