ಡೈಲಿ ವಾರ್ತೆ: 01/Feb/2024
ಕೋಟ: ಜೀವನದಲ್ಲಿ ಜಿಗುಪ್ಸೆ ವ್ಯಕ್ತಿ ಆತ್ಮಹತ್ಯೆಗೆ ಶರಣು!
ಕೋಟ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವ
ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.31 ರಂದು ತಡರಾತ್ರಿ ತೆಕ್ಕಟ್ಟೆ ಕೊಮೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕೊಮೆ ಸಂದೀಪ್(31) ಎಂದು ತಿಳಿದು ಬಂದಿದೆ.
ಇವರಿಗೆ ವಿಪರೀತ ಕುಡಿತದ ಚಟ ಹೊಂದಿದ್ದು ಹಾಗೂ ಇವರನ್ನು ಹೆಂಡತಿ ಬಿಟ್ಟು ಹೋಗಿದ್ದರಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಜ. 31 ರಂದು ತಡರಾತ್ರಿ ಸಮಯ 12:45 ಸುಮಾರಿಗೆ ಮನೆಯ ಮಲಗುವ ಕೋಣೆಯ ಮರದ ಅಡ್ಡೆಗೆ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಸಂಬಂಧಿ ಪಾಂಡ(53) ಇವರು ಕೋಟ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಕೋಟ ಜೀವನ್ ಮಿತ್ರ ನಾಗರಾಜ್ ಪುತ್ರನ್ ರವರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರ ಆಸ್ಪತ್ರೆಗೆ ಸಾಗಿಸಿರುತ್ತಾರೆ.