ಡೈಲಿ ವಾರ್ತೆ: 01/Feb/2024

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರ ಮೃತ್ಯು!

ಬಂಟ್ವಾಳ : ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮಧ್ವ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.

ಮೃತ ಬೈಕ್ ಸವಾರನನ್ನು ಬೆಳ್ತಂಗಡಿ ತಾಲೂಕಿನ ಲೈಲಾ ನಿವಾಸಿ ಸಚಿನ್ ಗೌಡ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಿ.ಸಿ.ರೋಡ್ ಕಡೆಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಬೈಕ್ ಸವಾರ ಸಚಿನ್ ಗೌಡ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಭೇಟಿ ನೀಡಿ ಮುಂದಿನ ತನಿಖೆ ನಡೆಸುತ್ತಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.