ಡೈಲಿ ವಾರ್ತೆ: 03/Feb/2024
ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಎಸಳು ತಿನ್ನುವುದರ ಪ್ರಯೋಜನಗಳು.!
ಅರೋಗ್ಯ: ಅಡುಗೆಯಲ್ಲಿ ಬಳಸುವ ಸಾಂಬಾರ ಪದಾರ್ಥದಲ್ಲಿ ಬೆಳ್ಳುಳ್ಳಿ ಕೂಡ ಒಂದು. ಇದರಲ್ಲಿ ಹಲವಾರು ಖನಿಜಾಂಶಗಳು, ವಿಟಮಿನ್ ಗಳು ಮತ್ತು ಪ್ರತಿರೋಧಕ ಶಕ್ತಿ ವೃದ್ಧಿಸುವಂತಹ ಗುಣಗಳು ಇವೆ. ಬೆಳ್ಳುಳ್ಳಿಯನ್ನು ಯಾವ ರೀತಿ ಸೇವಿಸುತ್ತೀರಿ ಎನ್ನುವುದರ ಮೇಲೆ ಜೀವನವು ಬದಲಾಗಬಹುದು. ಇದು ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯಿಂದ ಲಾಭ ನೀಡುವುದು.
ತುಂಬಾ ಘಾಟು ಹೊಂದಿರುವಂತಹ ಹಸಿ ಬೆಳ್ಳುಳ್ಳಿ ಸೇವನೆ ಮಾಡಿದರೆ ಅದರಿಂದ ಖಿನ್ನತೆ ದೂರ ಮಾಡಬಹುದು. ರಕ್ತವನ್ನು ಶುದ್ಧೀಕರಿಸಬಹುದು.
ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಆಗುವ ಪ್ರಯೋಜನಗಳು :
* ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಅದರ ಅಂಶಗಳು ದೇಹದಲ್ಲಿ ಸುಲಭವಾಗಿ ಹೀರಲ್ಪಡುತ್ತವೆ.
* ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಹಕಾರಿಯಾಗಿದೆ.
* ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು
* ಹಲವಾರು ಹೊಟ್ಟೆ ಸಂಬಂಧಿ ಸಮಸ್ಯೆಗಳನ್ನು ನಿವಾರಿಸುತ್ತದೆ.
* ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
* ಹೆಚ್ಚುತ್ತಿರುವ ದೇಹ ತೂಕದಿಂದ ನೀವು ಸಹ ತೊಂದರೆಗೊಳಗಾಗಿದ್ದರೆ, ಬೆಳಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿಯನ್ನು ಸೇವಿಸಿ. ಇದು ತೂಕವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.
* ರಕ್ತ ಪರಿಚಲನೆ ಸುಧಾರಿಸುತ್ತದೆ.
* ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯಕ
* ಹೊಟ್ಟೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.
* ಬೆಳ್ಳುಳ್ಳಿಯಲ್ಲಿ ಉತ್ಕರ್ಷಣ (Oxidation) ನಿರೋಧಕಗಳಿದ್ದು, ಇದು ರಕ್ತದೊತ್ತಡವನ್ನು ಸ್ಥಿರವಾಗಿಡಲು ಸಹಕಾರಿಯಾಗಿದೆ.
* ಮಲಬದ್ಧತೆ, ಗ್ಯಾಸ್, ಅಸಿಡಿಟಿಯಂತಹ (acidity) ಸಮಸ್ಯೆಯಿಂದ ಬಳಲುತ್ತಿದ್ದರೆ, ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದು ಉತ್ತಮ. ತ್ವಚೆಯ ತೇವಾಂಶವನ್ನು ಕಾಪಾಡಲು ಸಹಕಾರಿಯಾಗಿದೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಡೈಲಿ ವಾರ್ತೆಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.