

ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ “ನಭಾ – 2024” ಕಾರ್ಯಕ್ರಮ



ವಿಟ್ಲ : ಭಾರತ ದೇಶ ಸರ್ವಧರ್ಮ, ಜಾತಿ, ಮತದ ಪ್ರತೀಕ. ಈ ದೇಶ ಒಂದೇ ಜಾತಿ, ಧರ್ಮಕ್ಕೆ ಸೀಮಿತವಾಗಲು ಸಾಧ್ಯವಿಲ್ಲ ,
ಸ್ವ-ಧರ್ಮವನ್ನು ಪಾಲಿಸುವುದರ ಜೊತೆಗೆ ಇತರ ಧರ್ಮವನ್ನು ಗೌರವಿಸುವ ಮೂಲಕ ಸಾಮರಸ್ಯದ ಬದುಕು ಕಟ್ಟಿಕೊಂಡು ಈ ದೇಶದ ಸೌಹಾರ್ದ ಪರಂಪರೆಯನ್ನು ಉಳಿಸೋಣ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಹೇಳಿದರು.
ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ “ನಭಾ – 2024” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ಮನುಷ್ಯನಿಗೂ ವಿದ್ಯೆ, ಆರೋಗ್ಯ ಅತೀ ಮುಖ್ಯ ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಸೌಕರ್ಯಗಳನ್ನು ಒದಗಿಸುತ್ತಿದೆಯಾದರೂ ಖಾಸಗಿ ಸಂಸ್ಥೆಗಳು ಕೂಡಾ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ನೀಡುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಎಲ್ಲೋ ಒಂದು ಕಡೆ ವ್ಯಾಪಾರೀಕರಣ ಆಗುತ್ತಿದೆ ಎಂದಾದರೆ ಅದನ್ನು ಎಲ್ಲಾ ಸಂಸ್ಥೆಗಳ ಮೇಲೆ ಹೊರಿಸುವುದು ಸರಿಯಲ್ಲ, ಅವರು ಸೇವಾ ಮನೋಭಾವವನ್ನು ಕೂಡಾ ಪರಿಗಣಿಸಬೇಕಾಗಿದೆ ಎಂದರು.

ಮಕ್ಕಳ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಉತ್ತಮವಾದರೆ ಮುಂದಿನ ಜೀವನ ಯಶಸ್ವಿಯಾಗಲು ಸಾಧ್ಯ, ಪಠ್ಯದ ಜೊತೆಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅವರಲ್ಲಿ ರಾಷ್ಟ್ರ ಪ್ರೇಮ ಹಾಗೂ ಸೌಂದರ್ಯ ಪ್ರಜ್ಞೆ ಯನ್ನು ಮೂಡಿಸುವ ನಿಟ್ಟಿನಲ್ಲಿ ಪೋಷಕರು ಶಿಕ್ಷಕರ ಜೊತೆ ಕೈ ಜೋಡಿಸಿ ಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಜನಪ್ರಿಯ ಫೌಂಡೇಶನ್ ನ ಅಧ್ಯಕ್ಷ
ಡಾ. ಅಬ್ದುಲ್ ಬಶೀರ್ ವಿ.ಕೆ. ಮಾತನಾಡಿ ನಾನು ಓರ್ವ ವೈದ್ಯನಾಗಿ ಸಮಾಜದ ಸರ್ವ ಜಾತಿಯವರನ್ನು ಸಮಾನವಾಗಿ ಕಾಣುತ್ತಾ ಬಂದಿದ್ದೇನೆ, ಗ್ರಾಮೀಣ ಭಾಗದ ಜನರಿಗೆ ಅತೀ ಖಡಿಮೆ ಮೊತ್ತದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಸದುದ್ದೇಶದಿಂದ ಹುಟ್ಟೂರಿನಲ್ಲಿ ಈ ಸಂಸ್ಥೆಯನ್ನು ಹುಟ್ಟುಹಾಕಿದ್ದೇನೆ ಹೊರತು ದುಡ್ಡು ಮಾಡುವ ಉದ್ದೇಶದಿಂದ ಅಲ್ಲ. ನಾನು
ವೈದ್ಯನಾಗಿ ನನ್ನ ಕರ್ತವ್ಯವನ್ನು ಮಾಡುತ್ತಿದ್ದೇನೆ. ನನ್ನಿಂದ ಆಗುವ ಸಹಕಾರವನ್ನು ಸಮಾಜಕ್ಕೆ ನೀಡುತ್ತಾ ಬರುತ್ತಿದ್ದೇನೆ. ನನಗೆ ವಿವಿಧ ರೀತಿಯ ಸಹಕಾರ ನೀಡಿ ಪ್ರೋತ್ಸಾಹಿಸುತ್ತಿರುವ ಸರ್ವರಿಗೂ ಆಭಾರಿಯಾಗಿದ್ದೇನೆ ಎಂದರು.
ಎಸ್.ಎಂ.ಆರ್ ಗ್ರೂಪ್ಸ್ ನ ಆಡಳಿತ ನಿರ್ದೇಶಕ ಎಸ್.ಎಂ. ರಶೀದ್ ಹಾಜಿ ಮಾತನಾಡಿ ಕನಿಷ್ಠ ಅವಧಿಯಲ್ಲಿ ಬಹಳಷ್ಟು ಜನಪ್ರಿಯತೆ ಗಳಿಸಿಕೊಂಡಿರುವ ಶಿಕ್ಷಣ ಸಂಸ್ಥೆಯ ರುವಾರಿ ಡಾ. ಅಬ್ದುಲ್ ಬಶೀರ್ ಹಾಗೂ ಸಂಸ್ಥೆಯ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ದ.ಕ.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ಎಸ್.ಮಹಮ್ಮದ್ ಮಾತನಾಡಿ ನಗರ ಪಟ್ಟಣಗಳ ನಡೆಯುವ ಶೈಲಿಯಲ್ಲಿ ಗ್ರಾಮೀಣ ಪ್ರದೇಶವಾದ ಕಂಬಳಬೆಟ್ಟುವಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ ಎಂದಾದರೆ ಅದು ಡಾ.ಅಬ್ದುಲ್ ಬಶೀರ್ ರವರ ಇಚ್ಚಾಶಕ್ತಿಯೇ ಕಾರಣ ಎಂದ ಅವರು ಪೋಷಕರು ಮಕ್ಕಳಿಗೆ ಸಂಪತ್ತು ಮಾಡಿಡುವ ಬದಲು ಅವರಿಗೆ ಉತ್ತಮ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಿ ಅವರನ್ನೇ ಸಂಪತ್ತನ್ನಾಗಿ ಮಾಡಬೇಕು ಎಂದು ಕರೆ ನೀಡಿದರು.

ಜನಪ್ರಿಯ ಶಾಲಾ ಅಧ್ಯಕ್ಷೆ ಫಾತಿಮಾ ನಸ್ರೀನ ಬಶೀರ್, ಜನಪ್ರಿಯ ಫೌಂಡೇಶನ್ ನ ನಿರ್ದೇಶಕ ಕಿರಾಶ್ ಪರ್ತಿಪ್ಪಾಡಿ, ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ನಿರ್ದೇಶಕ ನೌಶೀನ್ ಬದ್ರಿಯಾ, ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬದ್ರಿಯಾ, ಮಂಗಳೂರು ಜನಪ್ರೀಯ ಆಸ್ಪತ್ರೆಯ ನಿರ್ದೇಶಕ
ಡಾ.ಮಹಮ್ಮದ್ ನೂಮಾನ್, ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕಾದ್ಯಕ್ಷ ರಶೀದ್ ವಿಟ್ಲ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ಡಾ.ಮೋಹನ್ ಆಳ್ವ, ಎಸ್.ಎಂ.ರಶೀದ್ ಹಾಜಿ, ಎಂ.ಎಸ್.ಮುಹಮ್ಮದ್ ಅವರನ್ನು ಸನ್ಮಾನಿಸಲಾಯಿತು.
ವಿಟ್ಲದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ ಡಿ.ಗ್ರೂಪ್ ವಿಟ್ಲ ಇದರ ಅದ್ಯಕ್ಷ ಖಲಂದರ್ ಪರ್ತಿಪ್ಪಾಡಿ, ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಹಾಗೂ ಸದಸ್ಯರನ್ನು ಅಭಿನಂದಿಸಲಾಯಿತು.
ವಿವಿಧ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು
ಶಾಲಾ ಮುಖ್ಯ ಶಿಕ್ಷಕ ಲಿಬಿನ್ ಕ್ಸೇವಿಯರ್ ಪ್ರಸ್ತಾವನೆ ಗೈದರು.
ಶಾಲಾ ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್ ಸ್ವಾಗತಿಸಿ, ಯುನೈಟೆಡ್ ನೇಷನ್ಸ್‌ನ ರಾಷ್ಟ್ರೀಯ ಕಾರ್ಯದರ್ಶಿ ಡಾ. ರವಿ ಕುಮಾರ್ ಎಲ್.ಪಿ. ವಂದಿಸಿದರು. ಶಾಲಾ 7ನೇ ತರಗತಿ ವಿದ್ಯಾರ್ಥಿಗಳಾದ ಆಸಿಯಾ ಅರ್ಫಾ, ಮೈಮೂನಾ ಶನುಂ, ನಫೀಸತ್ ಸ್ವಾನಿಹಾ, ಹಿಬಾ ಮರ್ಯಮ್, ನೂರಾ ಸುಲೈಮಾನ್ 6 ನೇ ತರಗತಿ ವಿದ್ಯಾರ್ಥಿನಿಯರಾದ ರಿಂಶಾ ಫಾತಿಮಾ ಹಾಗೂ ಝಿವಾ ಸೆಹ್ರಿನ್ ಫಾತಿಮಾ ವಿವಿಧ ಕಾರ್ಯಕ್ರಮ ನಿರೂಪಿಸಿದರು.