ಡೈಲಿ ವಾರ್ತೆ: 13/Feb/2024

ರೋಲರ್ ಸಾಗಿಸುತ್ತಿದ್ದ ಲಾರಿ ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿ ಸಂಚಾರಕ್ಕೆ ಅಡ್ಡಿ

ಬಂಟ್ವಾಳ : ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡು ಕೆಲ ಕಾಲ ಸಂಚಾರಕ್ಕೆ ಅಡ್ಡಿಯಾದ ಘಟನೆ ಬಿ.ಸಿ.ರೋಡ್ – ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಖಾಸಗಿ ಗುತ್ತಿಗೆ ಸಂಸ್ಥೆಗೆ ಸೇರಿದ ರೋಲರ್ ಇದಾಗಿದ್ದು, ಬೆಂಜನಪದವು ಸೈಟ್ ನಿಂದ ಪುತ್ತೂರು ಸವಣೂರು ಎಂಬಲ್ಲಿ ನಡೆಯಲಿರುವ ಕಾಮಗಾರಿಗೆ ಕೊಂಡು ಹೋಗುವ ವೇಳೆ ಮೊಡಂಕಾಪು ರೈಲ್ವೆ ಯ ಅಡಿಭಾಗದಲ್ಲಿ ಸಿಲುಕಿಕೊಂಡಿದೆ.

ಘಟನೆಯಿಂದ ರೈಲ್ವೆ ಇಲಾಖೆ ಗೆ ಸೇರಿದ ಕಬ್ಬಿಣದ ರಾಡ್ ತುಂಡಾಗಿ ಲಾರಿಯ ಮೇಲೆ ಬಿದ್ದಿದೆ ‌
ಸ್ಥಳಕ್ಕೆ ರೈಲ್ವೆ ಇಲಾಖೆಯವರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಭೇಟಿ ನೀಡಿ ಕ್ರೇನ್ ಬಳಸಿ ಲಾರಿಯನ್ನು ಬದಿಗೆ ಸರಿಸಿ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿದರು.