ಡೈಲಿ ವಾರ್ತೆ: 17/Feb/2024

ಕೋಟತಟ್ಟು: ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಹಾಗೂ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಉಚಿತ ನೋಂದಣಿ ಶಿಬಿರ

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್,ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಕೋಟ, ಕ್ಷೇಮಆರೋಗ್ಯ ಕೇಂದ್ರ ಕೋಟ ತಟ್ಟುಪಡುಕೆರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ( ಅಂದತ್ವ ನಿವಾರಣಾ ವಿಭಾಗ) ಉಡುಪಿ* ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರಹಾಗೂ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಉಚಿತ ನೋಂದಣಿ ಶಿಬಿರವು ಫೆ. 17 ರಂದು ಶನಿವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟತಟ್ಟು ಪಡುಕೆರೆ ಇಲ್ಲಿ ನೆರವೇರಿತು.

ಈ ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಕೆ ಸತೀಶ್ ಕುಂದರ್ ಬಾರಿಕೆರೆ ಅವರು ವಹಿಸಿಕೊಂಡು ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನರ ಆರೋಗ್ಯದ ಹಿತ ದೃಷ್ಟಿಯಿಂದ ಹಲವು ವೈದ್ಯಕೀಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡು ಬಂದಿರುತ್ತೇವೆ ಹಾಗೂ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಉಚಿತ ನೋಂದಣಿ ಶಿಬಿರ ಇಂದು ಆಯೋಜನೆ ಮಾಡಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಯೋಜನೆಯ ಸದುಪಯೋಗ ಪಡೆದುಕೊಂಡಿರುವುದರಿಂದ ತುಂಬಾ ಸಂತಸವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾಕ್ಟರ್ ಮಾಧವ್ ಪೈ,ಪ್ರಸಾದ್ ನೇತ್ರಾಲಯ ವೈದ್ಯಾಧಿಕಾರಿ ಡಾಕ್ಟರ್ ಅಂಬಿಕಾ NCD ವೈದ್ಯಾಧಿಕಾರಿ ಡಾಕ್ಟರ್ ಯಶಸಶ್ರೀ ಶೆಟ್ಟಿ ಶಾಲಾ ಮುಖ್ಯೋಪಾಧ್ಯಯರಾದ ಶ್ರೀಮತಿ ಜಾನಕಿ ಪಂಚಾಯತ್ ಸದಸ್ಯರಾದ ಶ್ರೀಮತಿ ಅಶ್ವಿನಿ ದಿನೇಶ್, ವಾಸು ಪೂಜಾರಿ, ರವೀಂದ್ರ ತಿಂಗಾಳಾಯ, ರಾಬರ್ಟ್ ರಾಡ್ರಿಗಸ್ ಶ್ರೀಮತಿ ಸಾಹಿರ ಬಾನು, PRO ಮೋಹನ ದಾಸ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರಾದ ಗಣೇಶ್ ಕಾರ್ಯಕ್ರಮವನ್ನು ನಿರೂಪಿಸಿದರು ಸದಸ್ಯರಾದ ವಾಸು ಪೂಜಾರಿ ಅವರು ಸ್ವಾಗತಿಸಿದರು ಕಾರ್ಯದರ್ಶಿ ಸುಮತಿ ಅಂಚನ್ ಧನ್ಯವಾದ ಹೇಳಿದರು.