ಡೈಲಿ ವಾರ್ತೆ: 18/Feb/2024
ಖಾಸಗಿ ಬಸ್ ಹಾಗೂ ಇನ್ನೋವಾ ಕಾರು ಅಪಘಾತ – ಇಬ್ಬರು ಸ್ಥಳದಲ್ಲೇ ಮೃತ್ಯು
ರಾಯಚೂರು: ರಾಯಚೂರಿನ ಕಸಬೆ ಕ್ಯಾಂಪ್ ಬಳಿ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಹಾಗೂ ಇನ್ನೋವಾ ಕಾರ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ ಮೇರಿ (64) ಮೃತ ದುರ್ದೈವಿ.
ಖಾಸಗಿ ಬಸ್ ಹೈದ್ರಾಬಾದ್ನಿಂದ ಸಿಂಧನೂರು ಮಾರ್ಗವಾಗಿ ಹೊರಟಿತ್ತು. ಗದಗನಿಂದ ರಾಯಚೂರು ಮಾರ್ಗವಾಗಿ ಇನ್ನೋವಾ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎರಡು ವಾಹನಗಳು ವೇಗವಾಗಿ ಇದ್ದ ಕಾರಣ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಐವರು ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯದಿಂದ ಪಾರಾಗಿದ್ದಾರೆ. ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು,