ಡೈಲಿ ವಾರ್ತೆ: 28/Feb/2024

ಪಾಂಗಾಳ: ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿಗೆ ಕಾರು ಡಿಕ್ಕಿ- ಚಾಲಕ ಮೃತ್ಯು!

ಕಾಪು : ಕಾಪುವಿನ ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಳಾಗಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಸಿದೆ.

ಮೃತ ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ.
ಕಾಪುವಿನ ಮೆಸ್ಕಾಂ ಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಇವರು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಲಾರಿ ಹಾಗೂ ಕಾರನ್ನು ತೆರೆವುಗೊಳಿಸಿದ್ದಾರೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.