ಡೈಲಿ ವಾರ್ತೆ: 29/Feb/2024

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಅರುಣ್‌ ಕುಮಾರ್‌ ಪುತ್ತಿಲ ಬಂಡಾಯ ಸ್ಪರ್ಧೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಕಣಕ್ಕಿಳಿಯುವುದು ಖಚಿತವಾಗಿದೆ. ಈ ಕುರಿತಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲಿ ಬಿಜೆಪಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದಿದೆ. ಸ್ವಪಕ್ಷದ ಕಾರ್ಯಕರ್ತರೇ ಟೀಕೆ ಮಾಡುತ್ತಿದ್ದಾರೆ. ಹಾಗಾಗಿ ರಾಜ್ಯ ನಾಯಕರು ಮತ್ತು ಹೈಕಮಾಂಡ್‌ ಹೊಸ ಅಭ್ಯರ್ಥಿಯ ಹುಡುಕಾಟದಲ್ಲಿರುವಾಗಲೇ ಅರುಣ್‌ ಕುಮಾರ್‌ ಪುತ್ತಿಲ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಘೋಷಣೆಯಾಗಿದೆ.