



ಡೈಲಿ ವಾರ್ತೆ: 08/Mar/2024


ಅನ್ಯಕೋಮಿನ ವ್ಯಕ್ತಿಯಿಂದ ಮನೆಗೆ ನುಗ್ಗಿ ಮಹಿಳೆ, ಮಕ್ಕಳ ಮೇಲೆ ಹಲ್ಲೆ – ಆಸ್ಪತ್ರೆಗೆ ದಾಖಲು
ವಿಟ್ಲ: ಅನ್ಯಕೋಮಿನ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯರ ಮತ್ತು ಮಕ್ಕಳ ಮೇಲೆ ದೌರ್ಜನ್ಯವೆಸಗಿದ ಘಟನೆ ವಿಟ್ಲ ಸಮೀಪದ ಕನ್ಯಾನ ಕಣಿಯೂರು ತಲಕ್ಕಿ ಎಂಬಲ್ಲಿ ನಡೆದಿದೆ.
ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪಿಯನ್ನು ಸಿದ್ಧಿಕ್ ಎಂದು ತಿಳಿದು ಬಂದಿದೆ.
ಈ ಘಟನೆಯನ್ನು ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ತೀವ್ರವಾಗಿ ಖಂಡಿಸಿದ್ದು, ತಕ್ಷಣ ಆರೋಪಿಯನ್ನು ಬಂಧಿಸಿ ಸೂಕ್ತಕ್ರಮ ಕೈಗೊಂಡು ಜಾಮೀನು ರಹಿತ ಕೇಸು ದಾಖಲಿಸಬೇಕೆಂದು” ಹಿಂ.ಜಾ.ವೇ ಆಗ್ರಹಿಸಿದೆ.