



ಡೈಲಿ ವಾರ್ತೆ: 10/Mar/2024




ಉಡುಪಿ ಮೂಲದ ವ್ಯಕ್ತಿ ಅಯೋಧ್ಯೆಯಲ್ಲಿ ಹೃದಯಾಘಾತದಿಂದ ಮೃತ್ಯು!
ಉಡುಪಿ: ಉಡುಪಿಯ ಸಂಘದ ಹಿರಿಯ ಸಕ್ರಿಯರಾಗಿದ್ದ ಪಾಂಡುರಂಗ ಶಾನುಭಾಗರು ಅಯೋಧ್ಯೆಯಲ್ಲಿ ಮಾ. 10 ರಂದು ಭಾನುವಾರ ಮಧ್ಯಾಹ್ನ ರಾಮಮಂದಿರದ ಸಮೀಪದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಿಗ್ಗೆ ರಾಮನ ದರ್ಶನ ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿ ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂತೋಷದಿಂದ ತೆರಳಿದ್ದರು. ಆ ಬಳಿಕ ಮಧ್ಯಾಹ್ನದ ವೇಳೆ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ಗೇಟ್ ಬಳಿಯಲ್ಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಮೀಪವರ್ತಿಗಳು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿರುತ್ತಾರೆ ಎಂದು ತಿಳಿದು ಬಂದಿದೆ.

