ಡೈಲಿ ವಾರ್ತೆ: 11/Mar/2024
ಗೋಬಿ ಮಂಚೂರಿ ನಿಷೇಧ ಕುರಿತು ಪರೀಕ್ಷೆ, ವರದಿ ಬಳಿಕ ಮುಂದಿನ ಕ್ರಮ: ಸಚಿವ ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ : ಗೋಬಿ ಮಂಚೂರಿ ನಿಷೇಧದ ಬಗ್ಗೆ ಪರೀಕ್ಷೆ ನಡೆಸುವಂತೆ ಹೇಳಲಾಗಿತ್ತು. ಅದರಂತೆ ಪರೀಕ್ಷೆ ನಡೆಸಲಾಗಿದ್ದು, ವರದಿ ಪರಿಶೀಲಿಸಿ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸೋಮವಾರ ತಿಳಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.
ನಗರದಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ನಿಷೇಧ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈಗಾಗಲೇ ಗೋಬಿ ಮಂಚೂರಿ, ಬಾಂಬೆ ಮಿಠಾಯಿ ನಿಷೇಧ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಬಗ್ಗೆ ಸ್ಪಷ್ಟವಾಗಿ ಮಾಹಿತಿ ಇಲ್ಲ. ವರದಿ ನೋಡಿಕೊಂಡು ಏನು ಮಾಡಬೇಕೆಂದು ತಿಳಿಸುತ್ತೇವೆ ಎಂದರು.