ಡೈಲಿ ವಾರ್ತೆ: 12/Mar/2024

ಮಂಡ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಉರುಳಿ ಬಿದ್ದು
ಓರ್ವ ಸಾವು!

ಮಂಡ್ಯ: ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಉರುಳಿ ಬಿದ್ದು
ಓರ್ವ ಮೃತಪಟ್ಟು ಮತ್ತೋರ್ವನಿಗೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಮೃತರು ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದ ನಂದೀಶ್ ಎಂದು ತಿಳಿದು ಬಂದಿದೆ.
ಅಣ್ಣ ತಮ್ಮಂದಿರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ನಿಯಂತ್ರಣ ತಪ್ಪಿ ನೀರಿಲ್ಲದೆ ಕಾಲುವೆಗೆ ಸೇತುವೆ ಮೇಲಿಂದ ಕಾರು ಉರುಳಿ ಬಿದ್ದಿದೆ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.