ಡೈಲಿ ವಾರ್ತೆ: 12/Mar/2024

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ.

ಬಂಟ್ವಾಳ : ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರಾಗಿ ಹಾಗೂ ಬಂಟ್ವಾಳ ತಾಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಜಯಂತಿ ವಿ. ಪೂಜಾರಿ ನೇಮಕಗೊಂಡಿದ್ದಾರೆ.

ಮಾಜಿ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಜಯಂತಿ ವಿ.ಪೂಜಾರಿ ಅವರನ್ನು ಕರ್ನಾಟಕ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.

ಅನಂತಾಡಿ ಗ್ರಾಮದ ಬಾಕಿಲ ನಿವಾಸಿಯಾಗಿರುವ ಜಯಂತಿ ವಿ.ಪೂಜಾರಿ ಅವರು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾಗಿ, ಶಿವಗಿರಿ ಮಹಿಳಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿ, ಮಾಣಿ ವಲಯ ಜನಜಾಗೃತಿ ವೇದಿಕೆಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದ.ಕ.ಜಿಲ್ಲಾ ಕೆಡಿಪಿಯ ಮಾಜಿ ಸದಸ್ಯರಾಗಿ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.