
ಡೈಲಿ ವಾರ್ತೆ: 14/Mar/2024
ಮಣಿಪಾಲ: ಗ್ಯಾರೇಜ್ ನಲ್ಲಿ ಅವಘಡ – ಬಸ್ಸಿನ ಚಕ್ರಕ್ಕೆ ಸಿಲುಕಿ ಬಸ್ ಮಾಲಕ ಮೃತ್ಯು!
ಮಣಿಪಾಲ: ಉಡುಪಿ ನಗರದ ಮಣಿಪಾಲ ಸಮೀಪದ 80 ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ಸಂಭವಿಸಿದ ಅವಘಡದಲ್ಲಿ ಬಸ್ ಮಾಲಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಾವನ್ನಪ್ಪಿದವರು ಖಾಸಗಿ ಬಸ್‌ನ ಮಾಲಕ ದಯಾನಂದ ಶೆಟ್ಟಿ (65) ಎಂದು ತಿಳಿಯಲಾಗಿದೆ.
ಇವರು ತಮ್ಮ ಬಸ್ ಅನ್ನು ಗ್ಯಾರೇಜ್‌ನಲ್ಲಿ ರಿಪೇರಿಗೆ ನೀಡಿದ್ದನ್ನು ನೋಡಲು ಬಂದಿದ್ದರು. ಈ ವೇಳೆ ಬಸ್‌ನ ಎದುರು ನಿಂತಿದ್ದ ವೇಳೆ ಚಾಲಕ ಬಸ್ ಚಲಾಯಿಸಿದ ಪರಿಣಾಮ ಅವರು ಮುಂಭಾಗದ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ.
ತತ್‌ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ